ವಿದ್ಯುತ್ ಕಡಿತ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಹಿಂದಿನ ಸರ್ಕಾರ ಕಾರಣ: ಇಂಧನ ಸಚಿವ ಜಾರ್ಜ್

ಬೆಂಗಳೂರು: ಮುಂದಿನ ದಿನಗಳಲ್ಲಿ ವಿದ್ಯುತ್ ಸಮಸ್ಯೆ ಬಗೆಹರಿಯಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ನಂತರ ಮಾತನಾಡಿ, ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಬರಪೀಡಿತ ತಾಲೂಕುಗಳ ಘೋಷಣೆ ಮಾಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ 8000 ಮೆಗಾ ವ್ಯಾಟ್ ಬೇಡಿಕೆ ಇತ್ತು. ಮಳೆ ಕೊರತೆ ಕಾರಣ ವಿದ್ಯುತ್ ಪ್ರಭಾವ ಸೃಷ್ಟಿಯಾಗಿದೆ. ಈ ವರ್ಷ 16,000 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ. ಒಂದೇ ಸಾರಿ ಇಷ್ಟು ಬೇಡಿಕೆ ಇದ್ದಾಗ ಪೂರೈಕೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಈ ಸ್ಥಿತಿಗೆ ಹಿಂದಿನ ಸರ್ಕಾರವೇ ಕಾರಣ. ಆದರೆ, ನಾವು ಇಲ್ಲಿವರೆಗೂ ಯಾರನ್ನೂ ಬ್ಲೇಮ್ ಮಾಡಿಲ್ಲ. ಸಮಸ್ಯೆ ಗೊತ್ತಿದ್ದರೂ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಪಾವಗಡದಲ್ಲಿ 2300 ಮೆಗಾ ವ್ಯಾಟ್ ಉತ್ಪಾದನೆಗೆ ಯೋಜನೆ ಇದೆ. ನಾವ್ಯಾರೂ ಕಾಣೆಯಾಗಿಲ್ಲ, ಹಗಲು -ರಾತ್ರಿ ಕೆಲಸ ಮಾಡುತ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ, ಸಚಿವರು ಸಲಹೆ ಕೊಟ್ಟರೆ ಸ್ವೀಕರಿಸುತ್ತೇವೆ. ಆದರೆ, ಸುಮ್ಮನೆ ಆರೋಪ ಮಾಡುವುದು ಬೇಡ ಎಂದು ಜಾರ್ಜ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read