HomeLatest NewsBREAKING NEWS: ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ: ಆರೋಪಿ ಅರೆಸ್ಟ್

BREAKING NEWS: ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ: ಆರೋಪಿ ಅರೆಸ್ಟ್

ಬೆಂಗಳೂರು: ಕೆಕೆ ಎಕ್ಸ್ ಪ್ರೆಸ್ ರೈಲಿಗೆ ಹುಸಿ ಬಾಂಬ್ ಕರೆ ಮಾಡಿರುವ ಘಟನೆ ನಡೆದಿದೆ. ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಕೆಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಎಂದು ವ್ಯಕ್ತಿಯೋರ್ವ ಬೆದರಿಕೆಯೊಡ್ಡಿದ್ದಾನೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಾಡಿ ಪೊಲೀಸರು ರೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ. ರಾತ್ರಿ 1:30ರವರೆಗೆ ತಪಾಸಣೆ ನಡೆಸಲಾಗಿದ್ದು, ಈ ವೇಳೆ ಹುಸಿ ಬಾಂಬ್ ಬೆದರಿಕೆ ಕರೆ ಎಂಬುದು ದೃಢವಾಗಿದೆ.

ಇದೇ ವೇಳೆ ಹುಸಿ ಬಾಂಬ್ ಕರೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ದೀಪಕ್ ಸಿಂಗ್ ಬಂಧಿತ ಆರೋಪಿ. ಆರೋಪಿಯನ್ನು ವಶಕ್ಕೆ ಪಡೆದು ವಾಡಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular