HomeKarnatakaKKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ.

ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ಡಿಪೋಗೆ ಸೇರಿದ್ದ ಬಸ್ ಕಲಬುರ್ಗಿಯಿಂದ ಯಾದಗಿರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಲಬುರ್ಗಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular