ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಚಲಿಸುತಿದ್ದ ಬಸ್ ಏಕಾಏಕಿ ಧಗಧಗ ಹೊತ್ತಿ ಉರಿದಿದೆ.
ಬೀದರ್ ಕಡೆಯಿಂದ ಬರುತ್ತಿದ್ದ ಬಸ್ ಔರಾದ್ ಕಡೆಗೆ ತೆರಳುತ್ತಿತ್ತು. ಬಸ್ ನಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಔರಾದ್ ನ ಕಪ್ಪೆಕೇರಿ ಬಳಿ ಬಸ್ ಬರುತ್ತಿದ್ದಂತೆ ಬಸ್ ಎಂಜೀನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಪ್ರಯಾಣಿಕರು ಬಸ್ ನಿಂದ ಕೆಳಗಿಳಿದ್ದಾರೆ.
ಕ್ಷಣ ಮಾತ್ರದಲ್ಲೇ ಹೊಗೆ ಬೆಂಕಿಯಾಗಿ ಇಡೀ ಬಸ್ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಧಗಧಗನೆ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಪ್ರಯಾಣಿಕರು ಹಾಗೂ ಚಾಲಕ, ಕಂಡಕ್ಟರ್ ಬಸ್ ನಿಂದ ಕೆಳಗಿಳಿದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ.