HomeAutoBREAKING NEWS: ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿ: ಬೈಕ್ ಗೆ ಹೊತ್ತಿಕೊಂಡ ಬೆಂಕಿ; ಇಬ್ಬರು ಸವಾರರು ದುರ್ಮರಣ

BREAKING NEWS: ಕೆ.ಕೆ.ಆರ್.ಟಿ.ಸಿ ಬಸ್ ಡಿಕ್ಕಿ: ಬೈಕ್ ಗೆ ಹೊತ್ತಿಕೊಂಡ ಬೆಂಕಿ; ಇಬ್ಬರು ಸವಾರರು ದುರ್ಮರಣ

ಕಲಬುರ್ಗಿ: ಕೆ.ಕೆ.ಆರ್ ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲಬುರ್ಗಿ ಹೊರವಲಯದ ನಂದಿಕೂರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ಗೆ ಕೆಕೆಆರ್ ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸುಟ್ಟು ಭಸ್ಮವಾಗಿದೆ.

ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಕಲಬುರ್ಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular