HomeLatest Newsಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

ಕೆಲ ತಿಂಗಳುಗಳ ಹಿಂದೆ ಬಾಲಿವುಡ್ ಚಿತ್ರರಂಗದ ಖ್ಯಾತ ನಟ ಸುನಿಲ್ ಶೆಟ್ಟಿ ಅವರ ಪುತ್ರಿ ಅತಿಯಾ ಶೆಟ್ಟಿ ಅವರ ಜೊತೆ ವಿವಾಹವಾಗಿರುವ ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್ ಭಾನುವಾರದಂದು ನಾಗಾರಾಧನೆಯ ಪುಣ್ಯಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಕೆ.ಎಲ್. ರಾಹುಲ್, ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಸೇವೆ ನೆರವೇರಿಸಿದ್ದಾರೆ. ಬಳಿಕ ಹೊಸಳ್ಳಿಗಮ್ಮನ ದರ್ಶನ ಪಡೆದ ಅವರು ಪ್ರಸಾದ ಭೋಜನ ಸ್ವೀಕರಿಸಿದ್ದಾರೆ.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ರಾಹುಲ್ ಅವರಿಗೆ ದೇಗುಲದ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದ್ದು, ಬಳಿಕ ದೇವಾಲಯದ ಆಡಳಿತ ಮಂಡಳಿ ಕಚೇರಿಗೂ ರಾಹುಲ್ ಭೇಟಿ ನೀಡಿದ್ದಾರೆ. ಕೆ.ಎಲ್. ರಾಹುಲ್ ಪ್ರತಿ ವರ್ಷವೂ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಸುಬ್ರಹ್ಮಣ್ಯ ದೇವರ ಆಶೀರ್ವಾದ ಪಡೆಯುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular