HomeIndiaಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೆಹಲಿಯಲ್ಲಿ ಭಾರಿ ಬೇಡಿಕೆ: 70 ಸಾವಿರ ಲೀಟರ್ ಮಾರಾಟ ಗುರಿ

ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿಗೆ ದೇಶಾದ್ಯಂತ ಬೇಡಿಕೆ ಹೆಚ್ಚುತ್ತಿದೆ. ದೆಹಲಿಯಲ್ಲಿ ನಿರೀಕ್ಷೆಗಿಂತಲೂ ಹೆಚ್ಚು ನಂದಿನಿ ಹಾಲು ಮಾರಾಟವಾಗಿದೆ.

ಮೊದಲ ದಿನವೇ 10 ಸಾವಿರ ಲೀಟರ್‌ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇನ್ನು ಕೆಲವೇ ತಿಂಗಳಲ್ಲಿ 70 ಸಾವಿರ ಲೀಟರ್‌ ಹಾಲು ಮತ್ತು ಮೊಸರು ಮಾರಾಟ ಮಾಡುವ ಗುರಿ ಇದೆ.

ನಂದಿನಿ ಹಾಲಿಗೆ ಕಡಿಮೆ ಬೆಲೆ, ಉತ್ತಮ ಗುಣಮಟ್ಟ ಪ್ರಮುಖ ಆಕರ್ಷಣೆಯಾಗಿದೆ. ಈಗಾಗಲೇ ದೆಹಲಿ ಮಾರುಕಟ್ಟೆಯಲ್ಲಿ ಅಮುಲ್, ಮದರ್ ಡೈರಿ ಹಿಡಿತ ಸಾಧಿಸಿವೆ. ಇವುಗಳಿಗೆ ಪೈಪೋಟಿ ನೀಡಲು ಮುಂದಾಗಿರುವ ಕೆಎಂಎಫ್ ಗುಣಮಟ್ಟ ಮತ್ತು ಸ್ಪರ್ಧಾತ್ಮಕ ದರದೊಂದಿಗೆ ಗ್ರಾಹಕರನ್ನು ಸೆಳೆಯಲು ತಂತ್ರಗಾರಿಕೆ ರೂಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಮುಲ್, ಮದರ್ ಡೈರಿ, ನಂದಿನಿ ಹಾಲಿನ ಗುಣಮಟ್ಟ ಮತ್ತು ದರದಲ್ಲಿ ನಂದಿನಿ ಬ್ರಾಂಡ್ ಗ್ರಾಹಕರಿಗೆ ಆಕರ್ಷಕವಾಗಿದೆ. ಮೊದಲ ದಿನವೇ 10,000 ಲೀಟರ್ ಮಾರಾಟವಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದ್ದು, ಕೆಎಂಎಫ್ ಅಧಿಕಾರಿಗಳು ದೆಹಲಿಯಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ 70,000 ಲೀಟರ್ ಹಾಲು, ಮೊಸರು ಮಾರಾಟದ ಗುರಿ ಹೊಂದಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular