ರಾಜ್ಯದ ಜನತೆಗೆ ಮತ್ತೆ ನಂದಿನಿ ಹಾಲಿನ ದರ ಏರಿಕೆ ಶಾಕ್…?

ಹೊಸಪೇಟೆ: ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಎಲ್ಲಾ ರಾಜ್ಯಕ್ಕಿಂತ ನಂದಿನಿ ಹಾಲಿನ ದರ 12 -16 ರೂಪಾಯಿ ಕಡಿಮೆ ಇದೆ ಎಂದು ಹೇಳಿದ್ದಾರೆ.

ದರ ಏರಿಕೆ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ನಿರ್ಧಾರ ಮಾಡುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ದರ ಹೆಚ್ಚಳ ಮಾಡಲಾಗಿತ್ತು. ಆಗ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಸದ್ಯಕ್ಕೆ ಕೆಎಂಎಫ್ ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪ ಸಲ್ಲಿಸಿಲ್ಲ ಎಂದು ಭೀಮಾ ನಾಯಕ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read