HomeBusinessರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸಲಿದೆ ಕೆಎಂಎಫ್

ಹಾಸನ: ರೈತರಿಂದ ನೇರವಾಗಿ ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿ ಬಗ್ಗೆ ನಿರ್ಧರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ವಾರದೊಳಗೆ ಈ ಕುರಿತು ಆದೇಶ ಹೊರಬೀಳಲಿದೆ. ನಿಗದಿತ ದರದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸುವ ಕುರಿತಾಗಿ ಈಗಾಗಲೇ ಕೆಎಂಎಫ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಹಕಾರ ಇಲಾಖೆ ಅಧೀನದಲ್ಲಿ ಕೆಎಂಎಫ್ ಇದ್ದರೂ ಅದಕ್ಕೆ ಪ್ರತ್ಯೇಕ ಮಂಡಳಿ, ಅಧ್ಯಕ್ಷರು, ಆಡಳಿತ ಮಂಡಳಿ ಇದೆ. ಅಧಿಕೃತವಾಗಿ ಕೆಎಂಎಫ್ ಮೆಕ್ಕೆಜೋಳ ಖರೀದಿ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ. ಸಹಕಾರ ಸಚಿವನಾಗಿ ನಾನು ಮೆಕ್ಕೆಜೋಳ ಖರೀದಿಸಲು ಕೆಎಂಎಫ್ ಗೆ ಸೂಚನೆ ನೀಡಿದ್ದು, ಶೀಘ್ರದಲ್ಲೇ ಖರೀದಿ ಆದೇಶ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular