BREAKING: ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿ | Wild Elephant Attack

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಸೊಳ್ಳೆಕೋಡಿಯ ಚಿನ್ನಪ್ಪ(70) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ರಾತ್ರಿ ಬಹಿರ್ದೆಸೆಗೆ ತೆರಳಿದ್ದಾಗ ವೃದ್ದನ ಮೇಲೆ ಕಾಡಾನೆ ದಾಳಿ ಮಾಡಿ ಕೊಂದು ಹಾಕಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಎರಡು ದಿನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಪಾಲಿಬೆಟ್ಟದಲ್ಲಿ ನಿನ್ನೆ ಟಾಟಾ ಕಾಫಿ ಎಸ್ಟೇಟ್ ಕಾರ್ಮಿಕ ಸೆಲ್ವಂ(59) ಅವರನ್ನು ಕಾಡಾನೆ ಬಲಿ ಪಡೆದಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read