ಮಡಿಕೇರಿ: ರಾಜ್ಯದ ಹಲವೆಡೆ ಗುಡುಗು ಸಹಿತ ವರುಣಾರ್ಭಟ ಜೋರಾಗಿದ್ದು, ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ನಿರಂತರ ನಾಲ್ಕು ಗಂಟೆಗೂ ಹೆಚ್ಚುಸಮಯದಿಂದ ಒಂದೇಸಮನೇ ಮಳೆಯಾಗುತ್ತಿದೆ. ಮುಂದಿನ ಕೆಲ ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯ ರಾಜಧಾನಿ ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ. ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.