HomeKarnatakaಹೋಂ ಸ್ಟೇ, ರೆಸಾರ್ಟ್ ಲೈಸೆನ್ಸ್ ನವೀಕರಣ: ಮಹತ್ವದ ಅಪ್‌ಡೇಟ್

ಹೋಂ ಸ್ಟೇ, ರೆಸಾರ್ಟ್ ಲೈಸೆನ್ಸ್ ನವೀಕರಣ: ಮಹತ್ವದ ಅಪ್‌ಡೇಟ್

“ಜಿಲ್ಲೆಯಲ್ಲಿನ ಹೊಸ ಹೋಂ ಸ್ಟೇಗಳ ನೋಂದಣಿ ಮತ್ತು ಈಗಾಗಲೇ ಇರುವ ಹೋಂ ಸ್ಟೇಗಳಿಗೆ ಪರವಾನಗಿ ನೀಡುವುದು ಹಾಗೂ ಈಗಾಗಲೇ ನೋಂದಾಯಿಸಿರುವ ಹೋಂಸ್ಟೇಗಳಿಗೆ ನವೀಕರಣವನ್ನು ಮಾರ್ಚ್ 31ರೊಳಗೆ ಪೂರ್ಣಗೊಳಿಸಬೇಕು” ಎಂದು ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚಿಸಿದ್ದಾರೆ.

ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, “ಆನ್‍ಲೈನ್ ಮೂಲಕ ಪರವಾನಗಿ ನೋಂದಣಿ ಹಾಗೂ ನವೀಕರಣ ಕಾರ್ಯವು ಸ್ಥಗಿತವಾಗಿದ್ದು, ತಾತ್ಕಾಲಿಕವಾಗಿ ಆಫ್‌ಲೈನ್ ಮೂಲಕ ಸ್ಥಳ ಪರಿಶೀಲಿಸಿ ಅನುಮೋದನೆ ಮಾಡಬೇಕಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಹಾಗೂ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, “ಫೆಬ್ರವರಿ 7 ರವರೆಗೆ 100 ಹೊಸ ಹೋಂ ಸ್ಟೇಗಳಿಗೆ ಪರವಾನಗಿ ನೀಡಲು ಅರ್ಜಿ ಸಲ್ಲಿಕೆಯಾಗಿವೆ. ಹಾಗೆಯೇ 180 ಹೋಂ ಸ್ಟೇಗಳ ನವೀಕರಣಕ್ಕೆ ಅರ್ಜಿ ಸಲ್ಲಿಕೆಯಾಗಿದೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಿಲ್ಲಾಧಿಕಾರಿಗಳು ಮಾತನಾಡಿ, “ಖುದ್ದಾಗಿ ಸ್ಥಳಕ್ಕೆ ತೆರಳಿ ನೋಂದಣಿ ಹಾಗೂ ನವೀಕರಣ ಕಾರ್ಯವನ್ನು ಕೈಗೊಳ್ಳಬೇಕು. ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಮಾರ್ಚ್ ಅಂತ್ಯದೊಳಗೆ ಪರಿಶೀಲಿಸಿ ಅರ್ಜಿ ವಿಲೇವಾರಿಗೆ ಕ್ರಮವಹಿಸಬೇಕು” ಎಂದು ಹೇಳಿದರು.

ಹೋಂ ಸ್ಟೇಗಳ ಅಭಿಪ್ರಾಯ: ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ನಾಗೇಂದ್ರ ಪ್ರಸಾದ್, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷ ಮೋಂತಿ ಗಣೇಶ್ ಮಾತನಾಡಿ,  “ಕೊರೋನಾ ಸಂದರ್ಭದಲ್ಲಿ ಹಲವು ಹೋಂ ಸ್ಟೇಗಳು ಮುಚ್ಚಿ ಹೋದವು. ಆ ಸಂದರ್ಭದಲ್ಲಿ ಬದುಕು ನಡೆಸುವುದೇ ದುಸ್ತರವಾಗಿತ್ತು” ಎಂದು ಹೇಳಿದರು.

ಸಭೆಯಲ್ಲಿ ಕೂರ್ಗ್ ವಿಲೇಜ್ ಅಭಿವೃದ್ದಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ನಗರಸಭೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಆಸಕ್ತರನ್ನು ಒಳಗೊಂಡ ಉಪ ಸಮಿತಿ ರಚಿಸುವಂತೆ ನಿರ್ದೇಶನ ನೀಡಿದರು.

98 ಲಕ್ಷ ರೂ. ಖರ್ಚು ಮಾಡಿ ಕೂರ್ಗ್ ವಿಲೇಜ್‍ನ್ನು ನಿರ್ಮಿಸಲಾಗಿದೆ. ಅಲ್ಲಿ ಮತ್ತೆ ವೆಚ್ಚ ಮಾಡುವುದಕ್ಕಿಂತ ರಾಜಾಸೀಟನ್ನು ಅಭಿವೃದ್ಧಿ ಪಡಿಸುವುದು ಒಳಿತು ಎಂಬ ಸಲಹೆಯನ್ನು ಸಭೆಯಲ್ಲಿ ನೀಡಲಾಯಿತು.

ಕೂರ್ಗ್ ವಿಲೇಜ್ ಬಳಕೆಯಾಗಬೇಕು. ಜೊತೆಗೆ ನೆಹರು ಮಂಟಪವನ್ನು ಅಭಿವೃದ್ಧಿ ಪಡಿಸಬೇಕು. ರಾಜಾಸೀಟು ಅಭಿವೃದ್ಧಿ ಸಮಿತಿಯಲ್ಲಿ ಆಸಕ್ತರನ್ನು ಆಹ್ವಾನಿಸಬೇಕು. ಉಪ ಸಮಿತಿ ರಚನೆ ಮಾಡಿ ಪ್ರವಾಸಿ ಕೇಂದ್ರವನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಕೊಡವ ಹೆರಿಟೇಜ್ ಸೆಂಟರ್ ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಪ್ರತೀ ವರ್ಷ ಚರ್ಚೆಗೆ ಬರುತ್ತಿದೆ. ಆದರೆ ಕೆಲಸ ಆಗಿಲ್ಲ ಎಂದು ದೂರಿದರು.

ಭಾರತ ಸರ್ಕಾರದ ನಾಗರಿಕ ಸೇವೆಯಲ್ಲಿದ್ದ ಕೊಡಗು ಜಿಲ್ಲೆಯ ರತಿ ವಿನೇಜಾ ಅವರ ಪ್ರಯತ್ನದಿಂದ ಕೊಡವ ಹೆರಿಟೇಜ್ ಸ್ಥಾಪನೆಗೆ ಮುಂದಾಗಲಾಗಿತ್ತು. ಆದರೆ ಈ ಕಾಮಗಾರಿ ಪೂರ್ಣಗೊಂಡಿಲ್ಲ ಎಂದರು.

ವಾಹನ ನಿಲುಗಡೆ: ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ರಾಜಾಸೀಟು ವೀಕ್ಷಣೆಗೆ ವಾರಾಂತ್ಯದಲ್ಲಿ ಸಾವಿರಾರು ಜನರು ಆಗಮಿಸುತ್ತಾರೆ. ಇದರಿಂದ ಪ್ರವಾಸಿ ವಾಹನಗಳ ನಿಲುಗಡೆಗೆ ತೊಂದರೆಯಾಗಿದೆ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ವಾಹನ ನಿಲುಗಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಆದಷ್ಟು ಕಾಮಗಾರಿಯನ್ನು ಶೀಘ್ರ ಆರಂಭಿಸುವಂತೆ ನಿರ್ದೇಶನ ನೀಡಿದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular