HomeLatest NewsBREAKING: ಕೊಡಗಿನಲ್ಲಿ ಭಾರಿ ಮಳೆ ಮುನ್ಸೂಚನೆ: ನದಿ ತೀರ, ಬೆಟ್ಟಗುಡ್ಡ ಪ್ರದೇಶದ ಜನತೆಗೆ ಅಲರ್ಟ್ ಘೋಷಣೆ

BREAKING: ಕೊಡಗಿನಲ್ಲಿ ಭಾರಿ ಮಳೆ ಮುನ್ಸೂಚನೆ: ನದಿ ತೀರ, ಬೆಟ್ಟಗುಡ್ಡ ಪ್ರದೇಶದ ಜನತೆಗೆ ಅಲರ್ಟ್ ಘೋಷಣೆ

ಮಡಿಕೇರಿ: ರಾಜ್ಯಾದ್ಯಂತ ವರುಣಾರ್ಭಟ ಮತ್ತೆ ಜೋರಾಗಿದೆ. ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರಕ್ಕೆ ಜಿಲ್ಲಾಡಲಿತ ಸೂಚಿಸಿದೆ. ಇಂದು ಹಾಗೂ ನಾಳೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ನದಿ ತೀರ, ಬೆಟ್ಟಗುಡ್ಡ, ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular