HomeKarnatakaಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು...

ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ

ಕೊಡಗು: ರಾಜ್ಯದಲ್ಲಿ ಆಗಸ್ಟ್ 3ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಭೂ ಕುಸುತವುಂಟಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಮುಂದಿನ ಎರಡು ದಿನಗಳವರೆಗೆ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಬೆಟ್ಟ-ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular