HomeLatest NewsBIG NEWS: ವರುಣಾರ್ಭಟಕ್ಕೆ ಕುಸಿದುಬಿದ್ದ ಶಾಲೆ ಆವರಣದ ತಡೆಗೋಡೆ

BIG NEWS: ವರುಣಾರ್ಭಟಕ್ಕೆ ಕುಸಿದುಬಿದ್ದ ಶಾಲೆ ಆವರಣದ ತಡೆಗೋಡೆ

ಕೊಡಗು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಕೊಂಚ ಕಡೆಮೆಯಾಗಿದ್ದರೂ ಮಳೆಯ ಅವಾಂತರಗಳು ಮಾತ್ರ ಕಡಿಮೆಯಾಗಿಲ್ಲ.

ನಿರಂತರವಾಗಿ ಸುರಿದ ಮಳೆಯಿಂದಾಗಿ ಶಾಲೆಯ ಆವರಣದ ತಡೆಗೋಡೆ ಕುಸಿದು ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲ್ಲಿನ ವಿಶ್ವ ಮಾನವ ವಿದ್ಯಾಸಂಸ್ಥೆಯ ಶಾಲಾ ಆವರಣದ ತಡೆಗೋಡೆ ಕುಸಿದು ಬಿದ್ದು ಅವಾಂತರ ಸಂಭವಿಸಿದೆ. ಸದ್ಯ ಸ್ಭಾರಿ ಮಳೆ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.

ಇನ್ನು ಕುಶಾಲನಗರದ ನೆಲ್ಯಹುದಿಕೇರಿ ಗ್ರಾಮದಲ್ಲಿ ಕುಂಬಾರಗುಂಡಿಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular