ಕೊಡಗು : ಪತ್ನಿ ಮೇಲೆ ಭಾರತೀಯ ಸೇನೆಯ ಯೋಧನೋರ್ವ ಗುಂಡು ಹಾರಿಸಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದೆ.
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪದ ಕೊಣಗೇರಿಯಲ್ಲಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ದೀಪಿಕಾ ದೇಚಮ್ಮ (32) ಸ್ಥಿತಿ ಗಂಭೀರವಾಗಿದೆ. ಗುಂಡು ಹಾರಿಸಿದ ಯೋಧ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ.
ಕೌಟುಂಬಿಕ ಕಲಹದಿಂದ ಇಬ್ಬರ ನಡುವೆ ಜಗಳ ನಡೆದಿದ್ದು, ಕೋಪಗೊಂಡ ಯೋಧ ಕಾರ್ಯಪ್ಪ ವಿನು ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಮಹಿಳೆಯನ್ನ ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ . ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.