HomeKarnatakaನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

ಕೊಡಗು: ನಿರ್ಮಾಣ ಹಂತದ ತೆರೆದ ಬಾವಿಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಬಾವಿ ತೆರೆಯಲಾಗಿತ್ತು. ತಡರಾತ್ರಿ ಬಾವಿಗೆ ಕಾಡಾನೆಯೊಂದು ಬಿದ್ದು ಸಾವನ್ನಪ್ಪಿದೆ.

ಪಾಲೇಂಗಡ ಬಿದ್ದಪ್ಪ ಶಂಬು ಎಂಬುವವರ ಮನೆ ಮುಂದೆ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಮ್ರ‍ಿತ ಆನೆ ಮೇಲಕೆತ್ತುವ ಕಾರ್ಯ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular