ಕೊಡಗು: ವಿದ್ಯುತ್ ತಂತಿ ತುಳಿದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.
ಇಲ್ಲಿನ ಹಾಲುಗುಂದ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಈ ದುರಂತ ಸಂಭವಿಸಿದೆ. ಕೆ.ಜಿಮಮ್ (67) ಮೃತ ದುರ್ದೈವಿ. ಕಾಫಿ ತೋಟಕ್ಕೆ ನೀರು ಬಿಡಲೆಂದು ಹೋಗಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಿಳಿದ ಪರಿಣಾಮ ವಿದ್ಯುತ್ ಪ್ರವಹಿಸಿ ಜೀಮಮ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿರಾಜಪೇಟೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

