HomeKarnatakaಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ...!

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 65 ವರ್ಷದ ಮಹಿಳೆ ಆಯಿಷಾ ಕಾಡಾನೆ ದಾಳಿಗೆ ಸಾವನ್ನಪ್ಪಿದ್ದಾರೆ. ಇದು ಕಳೆದ ಒಂದು ವರದಲ್ಲಿ ನಡೆದ ಎರಡನೇ ಘಟನೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಡಾನೆ ಮಹಿಳೆಯ ತಲೆಯನ್ನು ತುಳಿದಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಲ ಕಾರ್ಮಿಕರು ಎಸ್ಟೇಟ್ ಕೆಲಸಕ್ಕೆ ಹೋಗುವಾಗ ಘಟನೆ ಬೆಳಕಿಗೆ ಬಂದಿದೆ. ಕೊಡಗಿನ ಅರೆಕಾಡು ಪ್ರದೇಶದಲ್ಲಿ ಕಾಡಾನೆ ದಾಳಿಗೆ ಕೆಲದಿನಗಳ ಹಿಂದಷ್ಟೇ ಕಟ್ಟೆಮಾಡು ದೇವಪ್ಪ ಎಂಬ 58 ವರ್ಷದ ವ್ಯಕ್ತಿ ಮೃತಪಟ್ಟಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular