HomeLatest NewsBIG NEWS: ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಘೋಷಣೆ

BIG NEWS: ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರವಾಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೊಡಗು ಜಿಲೆಯಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈಗಗಾಲೇ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸಂಭವಿಸಿದ್ದು, ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಈನಡುವೆ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುತ್ತಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular