HomeKarnatakaBREAKING: ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

BREAKING: ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಮಡಿಕೇರಿ: ವ್ಯಕ್ತಿಯೋರ್ವ ಒಂಟಿ ನಳಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ.

24 ವರ್ಷದ ಬಿ.ಕವನ್ ಕುರುಂಬಯ್ಯ ಆತ್ಮಹತ್ಯೆಗೆ ಶರಣಾದ ಯುವಕ. ಕವನ್ ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೇ ಮನನೊಂದು ದುಡುಕಿನ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಅರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular