BIG NEWS : ರಾಜ್ಯದಲ್ಲಿ ಜಲಪ್ರಳಯ… ಜಾಗತಿಕ ಮಟ್ಟದಲ್ಲಿ 3 ದುರಂತ ಸಂಭವ : ಭಯಾನಕ ಭವಿಷ್ಯ ನುಡಿದ ಕೋಡಿಮಠದ ಶ್ರೀ

ಹುಬ್ಬಳ್ಳಿ: ರಾಜ್ಯದಲ್ಲಿ ಒಂದೇ ಪಕ್ಷದ ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ರಾಜ್ಯದ ಬಗ್ಗೆ ಹಾಗೂ ಜಾಗತಿಕ ವಿಚಾರವಾಗಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಕೋಡಿಮಠದ ಶ್ರೀಗಳು, ಈ ಹಿಂದೆ ನಾನು ಹೇಳಿದ್ದೆ. ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಅದು ನಿಜವಾಗಿದೆ. ಈ ಬಾರಿ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ, ಜಲಪ್ರಳಯ ಸಂಭವಿಸುವ ಲಕ್ಷಣಗಳು ಇವೆ. ಕರುನಾಡಿಗೆ ಅಪತ್ತುಗಳಿದ್ದು, ದೈವಕೃಪೆಯಿಂದ ಮಾತ್ರ ಪಾರಾಗಬಹುದು ಎಂದು ತಿಳಿಸಿದ್ದಾರೆ.

ಅಲ್ಲದೇ ಜಾಗತಿಕ ಮಟ್ಟದಲ್ಲಿ ಮೂರು ಗಂಡಾಂತರಗಳು ಸಂಭವಿಸಲಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರ ಅಕಾಲಿಕ ಸಾವು ಸಂಭವಿಸಲಿದೆ. ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ವಿಜಯದಶಮಿಯಿಂದ ಸಂಕ್ರಾಂತಿವರೆಗೆ ಜಗತ್ತಿನಲ್ಲಿ ದುರ್ಘಟನೆಗಳು ನಡೆಯಲಿವೆ. ಆಳುವವರು ಅರಿತರೆ ಗಂಡಾಂತರಗಳಿಂದ ಪಾರಾಗಬಹುದು, ಇಲ್ಲವಾದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read