HomeKarnatakaನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ...

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಭಾರಿ ಮಳೆ ಬಗ್ಗೆ ಮಾಹಿತಿ: ಅಮಾವಾಸ್ಯೆ ಬಳಿಕ ವಿಪರೀತ ಮಳೆ ಸಾಧ್ಯತೆ

ದಾವಣಗೆರೆ: ಅಮಾವಾಸ್ಯೆ ಕಳೆದ ನಂತರ ವಿಪರೀತ ಮಳೆಯಾಗುವ ಸಂಭವವಿದೆ ಎಂದು ನಿಖರ ಭವಿಷ್ಯಕ್ಕೆ ಹೆಸರಾದ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹೊನ್ನಾಳಿಯಲ್ಲಿ ಮಾತನಾಡಿದ ಸ್ವಾಮೀಜಿ, ಅಮಾವಾಸ್ಯೆ ನಂತರ ರಾಜ್ಯದಲ್ಲಿ ವಿಪರೀತ ಮಳೆಯಾಗುವ ಸಂಭವ ಇದೆ. ಮಳೆಗೂ, ಅನ್ನಕ್ಕೂ ತೊಂದರೆ ಇಲ್ಲ. ಆದರೆ, ಪ್ರಕೃತಿಯಿಂದ ಹೆಚ್ಚಿನ ಹಾನಿಯಾಗುವ ಲಕ್ಷಣಗಳಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಹಾಗೂ ರಾಷ್ಟ್ರದಲ್ಲಿ ಗಂಡಾಂತರ ಕಾಡಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅಂತೆಯೇ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಹೆಚ್ಚಾದರೂ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular