ಹುಬ್ಬಳ್ಳಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಆರ್ ಪಿ ಎಫ್ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿದ್ದಾರೆ. 2013ರಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ರೈಲ್ವೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು.
ಸತತ ಆರು ಗಂಟೆಗಳ ಕಾಲ ರೈಲು ತಡೆದು ರೈತರ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ರೈಲು ತಡೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಾಗಿತ್ತಲ್ಲದೇ ವಾರಂಟ್ ಕೂಡ ಜಾರಿಯಾಗಿತ್ತು. ವಾರೆಂಟ್ ಹಿನ್ನೆಲೆಯಲ್ಲಿ ಇದೀಗ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ.

