ಹಾಸನ: ರಾಜ್ಯ ಕಾಅಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ವಿಚಾರ ತೀವ್ರ ಚರ್ಚೆಯಾಗುತ್ತಿರುವಾಗಲೇ ಗೃಹ ಸಚಿವ ಪರಮೇಶ್ವರ್ ಕೋಡಿಮಠಕ್ಕೆ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ.
ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಕೋಡಿಮಠದ ಶ್ರೀಗಳು ಭವಿಷ್ಯ ನುಡಿಯುವುದರಲ್ಲಿ ಪ್ರಸಿದ್ಧಿ ಪಡೆದಿದ್ದಾರೆ. ಸದ್ಯದ ರಾಜ್ಯ ರಾಜಕಾರಣದಲ್ಲಿ ಕುರ್ಚಿ ಪೈಪೋಟಿ ಜೋರಾಗಿರುವಾಗಲೇ ಗೃಹ ಸಚಿವ ಪರಮೇಶ್ವರ್ ದಿಢೀರ್ ಆಗಿ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದು ಚರ್ಚಿಸಿರುವುದು ಅಚ್ಚರಿಗೆ ಕಾರಣವಾಗಿದೆ.
ಸ್ಥಳೀಯ ಕಾಂಗ್ರೆಸ್ ಮುಖಂಡರಿಗೆ ಹಾಗೂ ಪೊಲೀಸ್ ಇಲಾಖೆಗೆ ಯಾವುದೇ ಮಾಹಿತಿ ನೀಡದೇ ಗೃಹ ಸಚಿವರು ಕೋಡಿಮಠಕ್ಕೆ ಭೇಟಿ ನೀಡಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಶ್ರೀಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
