HomeLatest NewsBIG NEWS: ಊಹೆಗೂ ನಿಲುಕದ ಆಘಾತ ಎದುರಾಗಲಿದೆ: ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

BIG NEWS: ಊಹೆಗೂ ನಿಲುಕದ ಆಘಾತ ಎದುರಾಗಲಿದೆ: ಮತ್ತೊಂದು ಗಂಡಾಂತರದ ಬಗ್ಗೆ ಭವಿಷ್ಯ ನುಡಿದ ಕೋಡಿಶ್ರೀಗಳು

ಹಾಸನ: ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಯಾರೂ ಊಹಿಸಿದ ದು:ಖ ಬರಲಿದೆ. ಜನವರಿಯೊಳಗೆ ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಕಾದಿದೆ ಎಂದು ಭಯಾನಕ ಭವಿಷ್ಯ ನುಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ದೊಡ್ದ ಮೇಘಸ್ಫೋಟವಾಗಲಿದೆ. ನಿರೀಕ್ಷೆಗೂ ಮೀರಿದ ದು:ಖ ಎದುರಾಗಲಿದೆ ಎಂದು ಹೇಳಿದ್ದಾರೆ.

ಈಗ ಕಂಡುಬರುತ್ತಿರುವ ಅಸ್ಥಿರತೆ ಇನ್ನೂ ಹೆಚ್ಚಾಗಲಿದೆ. ಮನುಷ್ಯ ಓಡಾಡುತ್ತಲೆ ಸಾಯುತ್ತಾನೆ ಎಂದು ಹೇಳಿದ್ದೆ. ಅದು ಮುಂದುವರೆಯಲಿದೆ ಎಂದಿದ್ದಾರೆ. ‘ಸೂಳೆಯ ಮಗನುಟ್ಟಿ ಆಳುವನು ಮುನಿಪುರವ ಯುದ್ಧವಿಲ್ಲದ ಮಡಿಯೇ ಪುರವೆಲ್ಲ ಕೂಳಾದೀತು’ ಎಂದು ಮಾರ್ಮಿಕವಾಗಿ ಸ್ವಾಮೀಜಿ ಹೇಳಿದ್ದಾರೆ. ಇದನ್ನು ಬರೆದಿಟ್ಟುಕೊಳ್ಳಿ. ಇದಕ್ಕೆ ಪರಿಹಾರ ಆಮೇಲೆ ಸೂಚಿಸುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular