ಬೆಂಗಳೂರು : ಕೋಗಿಲು ಲೇಔಟ್ ಒತ್ತುವರಿ ತೆರವು ವಿಚಾರ ಸಂಬಂಧ ಸತ್ಯಶೋಧನಾ ತಂಡ ರಚಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಯಲಹಂಕದ ಕೋಗಿಲು ಲೇಔಟ್ ಬಳಿ 200 ಕ್ಕೂ ಅಧಿಕ ಮನೆಗಳನ್ನು ಕಾಂಗ್ರೆಸ್ ಸರ್ಕಾರ ನೆಲಸಮ ಮಾಡಿರುವ ಕುರಿತು ಅದರ ಹಿಂದಿರುವ ಸತ್ಯಾಸತ್ಯತೆಯನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರು ಸತ್ಯಶೋಧನಾ ತಂಡ ರಚಿಸಿ ಆದೇಶ ಹೊರಡಿಸಿದ್ದಾರೆ ಎಂದು ಬಿಜೆಪಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದೆ.
ಏನಿದೆ ಆದೇಶದಲ್ಲಿ..?
ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲೋನಿ ಮತ್ತು ವಸೀಮ್ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಿರುವ ಕುರಿತು ಅದರ ಹಿಂದೆ ಅಡಗಿರುವ ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಲಾಗಿದೆ. ಸಮಿತಿಯ ಈ ಕೆಳಕಂಡ ಪ್ರಮುಖರು ಘಟನಾ ಸ್ಥಳಕ್ಕೆ ತೆರಳಿ, ಪರಿಶೀಲಿಸಿ, ಸಮಗ್ರ ವರದಿಯನ್ನು ಒಂದು ವಾರದೊಳಗೆ ನೀಡಲು ನಿರ್ದೇಶಿಸಲಾಗಿದೆ.
ಯಾರೆಲ್ಲಾ ಇದ್ದಾರೆ ಸತ್ಯಶೋಧನಾ ತಂಡದಲ್ಲಿ..?
ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ಕೆ.ಎಸ್. ನವೀನ್, ಮಾಳವಿಕಾ ಅವಿನಾಶ್ ತಮ್ಮೇಶ್ ಗೌಡ, ಎಸ್. ಹರೀಶ್ , ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮತ್ತಿತರರಿದ್ದಾರೆ.


