HomeLatest NewsBREAKING: ಕೋಗಿಲು ಲೇಔಟ್ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ

BREAKING: ಕೋಗಿಲು ಲೇಔಟ್ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ

ಬೆಂಗಳೂರು: ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮವಾಗಿ ನೆಲೆಸಿದ್ದವರ ಮನೆಗಳನ್ನು ಜಿಬಿಎ ಅಧಿಕಾರಿಗಳು ತೆರವುಗೊಳಿಸಿದ್ದು, ಮನೆ ಕಳೆದುಕೊಂಡ ಇಲ್ಲಿನ ಸಂತ್ರಸ್ತರಿಗೆ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನೀಡಲು ಸರ್ಕಾರ ಮುಂದಾಗಿದೆ.

ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳ ನೆಲಸಮ ಬೆನ್ನಲ್ಲೇ ಸಂತ್ರಸ್ತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಪರ್ಯಾಯ ವ್ಯವಸ್ಥೆ ಮೂಲಕ ಸಂತ್ರಸ್ತರಿಗೆ ಮನೆಗಳನ್ನು ನೀಡಲು ನಿರ್ಧರಿಸಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಡಿ ಸಂತ್ರಸ್ತರಿಗೆ ಮನೆಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಅಧಿಕೃತವಾಗಿ ಮಾಹಿತಿ ನಿಡಲಿದ್ದಾರೆ.

ಬೈಯ್ಯಪ್ಪನ ಹಳ್ಳಿಯಲಿ ಸಂತ್ರಸ್ತರುಗೆ ಮನೆ ನೀಡಲಾಗುತ್ತಿದೆ. ವಸತಿ ಇಲಾಖೆಯಿಂದ 180 ಮನೆಗಳನ್ನು ನೀಡಲು ಸರ್ಕಾರ ಮುಂದಾಗಿದೆ. ರಿಜಿಸ್ಟರ್ ಮಾಡಿಕೊಡುವುದಾಗಿಯೂ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಸಂತ್ರಸ್ತ ನಿವಾಸಿಗಳನ್ನು ಶಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular