HomeKarnatakaBREAKING : ಬಿಜೆಪಿ 'ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ' ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

BREAKING : ಬಿಜೆಪಿ ‘ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ’ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.

ಹೌದು. ಬಿಜೆಪಿ ಪಾಳಯದಲ್ಲಿ ಮಹತ್ತರದ ಬೆಳವಣಿಗೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ.   ತೆಲಂಗಾಣದ ಸಂಜಯ್ ಬಂಡಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಚಿಕ್ಕಮಗರವಳ್ಳಿ ತಿಮ್ಮೇಗೌಡ ರವಿ ಒಬ್ಬ ಭಾರತೀಯ ರಾಜಕಾರಣಿ, ಇವರು ಪ್ರಸ್ತುತ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದಾರೆ. ಅವರು ಕರ್ನಾಟಕ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು, ನಂತರ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶೀಘ್ರವೇ `ರಾಜ್ಯ ಶಿಕ್ಷಣ ನೀತಿ’ ಜಾರಿ : ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲು ರಾಜ್ಯದ್ದೇ ಹೊಸ ಶಿಕ್ಷಣ ನೀತಿ ರೂಪಿಸಿಕೊಳ್ಳಲು ಅಗತ್ಯ ರೂಪುರೇಷೆಗಳ ಪ್ರಸ್ತಾವನೆ ಸಿದ್ದಪಡಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಸಚಿವ ಡಾ.ಎಂ.ಸಿ. ಸುಧಾಕರ್ ಸೂಚನೆ ನೀಡಿದ್ದಾರೆ.

ಹೊಸ ಶಿಕ್ಷಣ ನೀತಿ ಜಾರಿ ಸಂಬಂಧ ಸಚಿವ ಡಾ.ಎಂ.ಸಿ. ಸುಧಾಕರ್ ಹಾಗೂ ಮಧುಬಂಗಾರಪ್ಪ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ರಾಜ್ಯದ ಹೊಸ ಶಿಕ್ಷಣ ನೀತಿ ರೂಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಶೀಘ್ರವೇ ಸಭೆ ಕರೆಯಲಿದ್ದು, ಈ ಸಭೆಯಲ್ಲಿ ಹೊಸ ಶಿಕ್ಷಣ ನೀತಿಯ ಬಗ್ಗೆ ರೂಪುರೇಷೆಗಳ ಪ್ರಸ್ತಾವನೆಗಳನ್ನು ಸಲ್ಲಿಸಬೇಕಿದೆ ಎಂದರು.

ಸಿಎಂ ಜೊತೆಗೆ ನಡೆಯುವ ಸಭೆಯಲ್ಲಿ ಹೊಸ ಶಿಕ್ಷಣ ನೀತಿ ಸಂಬಂಧ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಚರ್ಚಿಸಿ ಹೊಸ ನೀತಿ ತಯಾರು ಮಾಡಲು ಸಮಿತಿ ರಚನೆ ಸೇರಿದಂತೆ ಇನ್ನಿತರ ನಿರ್ಧಾರಗಳನ್ನು ಸಿಎಂ ಸಲಹೆ ಸೂಚನೆಯಂತೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular