HomeKarnatakaBREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತಪಟ್ಟವರು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಂಗಾರಪೇಟೆಯ ಸಾಯಿಗಗನ್ ಬಚಾವಾಗಿದ್ದಾರೆ. ಇವರು ರೇವಾ ಯುನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದಾರೆ. ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular