HomeKarnatakaಇಂದು ಕೋಲಾರ ಜಿಲ್ಲೆ ಬಂದ್ ಗೆ ಕರೆ: ಮಾವಿಗೆ ಬೆಂಬಲ ಬೆಲೆ ನೀಡಲು ಆಗ್ರಹ

ಇಂದು ಕೋಲಾರ ಜಿಲ್ಲೆ ಬಂದ್ ಗೆ ಕರೆ: ಮಾವಿಗೆ ಬೆಂಬಲ ಬೆಲೆ ನೀಡಲು ಆಗ್ರಹ

ಕೋಲಾರ: ಮಾವಿನ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಇಂದು ಕೋಲಾರ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ.

ಮಾವು ಬೆಳೆಗಾರರ ಸಂಘ ಮತ್ತು ವಿವಿಧ ಸಂಘ ಸಂಸ್ಥೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಕೋಲಾರ, ಶ್ರೀನಿವಾಸಪುರ ಸೇರಿದಂತೆ ಹಲವು ತಾಲೂಕುಗಳಲ್ಲಿ ಬಂದ್ ಆಚರಣೆ ಮಾಡುವ ಸಾಧ್ಯತೆ ಇದೆ. ಮಾವಿಗೆ ಕನಿಷ್ಠ ಎಂಟರಿಂದ ಹತ್ತು ಸಾವಿರ ರೂಪಾಯಿ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಲು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.

ಜಿಲ್ಲಾ ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನಿಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡದೆ ಮಾವು ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ಮಾವು ಬೆಳೆಗಾರರು, ರೈತ ಮುಖಂಡರು, ಕಾರ್ಮಿಕ ಸಂಘಟನೆಗಳು ಸೋಮವಾರ ಬಂದ್ ಗೆ ಕರೆ ನೀಡಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾವಿನ ಸೀಸನ್ ಮುಗಿಯುವ ಹಂತಕ್ಕೆ ಬಂದಿದ್ದು, ಬಹುತೇಕ ಬೆಳೆಗಾರರು ಕೊಯ್ಲು ಮಾಡುತ್ತಿದ್ದಾರೆ. ಶ್ರೀನಿವಾಸಪುರ ಕೇಂದ್ರೀಕೃತವಾಗಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಮಾವು ಬೆಳೆಯನ್ನು ಜೀವನಾಡಿ ಬೆಳೆಯಾಗಿ ನಂಬಿ ಜೀವನ ಸಾಗಿಸುತ್ತಿದ್ದಾರೆ. ಕಳೆದ ಮೂರು ನಾಲ್ಕು ವರ್ಷಗಳಿಂದ ಸಮಸ್ಯೆಗಳ ಸುಳಿಗೆ ಸಿಲುಕಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಗಳು ಬೆಳೆಗಾರರ ಕೈಹಿಡಿಯಬೇಕು. ಕನಿಷ್ಠ ಎಂಟರಿಂದ ಹತ್ತು ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರದ ಗಮನ ಸೆಳೆಯಲು ಕೊನೆಯ ಹಂತವಾಗಿ ಬಂದ್ ಗೆ ಕರೆ ನೀಡಲಾಗಿದೆ. ಆರ್ಥಿಕ ಸಾಮರ್ಥ್ಯ ಇಲ್ಲದ ಸಣ್ಣಪುಟ್ಟ ಮಾವು ಬೆಳೆಗಾರರು ಕೊಯ್ಲು ಮಾಡಲು ಸಾಧ್ಯವಾಗದೆ ಮರದಲ್ಲಿಯೇ ಮಾವನ್ನು ಬಿಡುತ್ತಿದ್ದು, ಇದನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಬೆಂಬಲ ಬೆಲೆ ನೀಡುವಂತೆ ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ಮನವಿ ಮಾಡಲಾಗಿದೆ. ಆದರೆ ಸ್ಪಂದನೆ ದೊರೆಯದ ಕಾರಣ ಬಂದ್ ಗೆ ಕರೆ ನೀಡಲಾಗಿದ್ದು, ವ್ಯಾಪಾರಸ್ಥರು, ಹೋಟೆಲ್ ಮಾಲೀಕರು, ವಾಣಿಜ್ಯ ಸಂಸ್ಥೆಯವರು ಬೆಂಬಲಿಸುವಂತೆ ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular