HomeKarnatakaರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಇಂದು ಬಿಜೆಪಿ ಬೃಹತ್ ಪ್ರತಿಭಟನೆ

ಕೋಲಾರ: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಕೋಲಾರದ ಅಂಬೇಡ್ಕರ್ ಪ್ರತಿಮೆ ಸಮೀಪದಿಂದ ಗಾಂಧಿ ವೃತ್ತದವರೆಗೂ ಪ್ರತಿಭಟನೆ ನಡೆಸಿ ಧರಣಿ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನತಾದರ್ಶನದಲ್ಲಿ ಸಂಸದ ಮುನಿಸ್ವಾಮಿಗೆ ಅವಮಾನ, ಕ್ಲಾಕ್ ಟವರ್ ನಲ್ಲಿ ತಲ್ವಾರ್ ದ್ವಾರ ನಿರ್ಮಿಸಲು ಅನುಮತಿ ಹಾಗೂ ಜಿಲ್ಲೆಯಲ್ಲಿ ಅಶಾಂತಿ, ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಂಸದರಾದ ತೇಜಸ್ವಿ ಸೂರ್ಯ, ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ, ಕೆ.ಎಸ್. ಈಶ್ವರಪ್ಪ, ಬಿಜೆಪಿ ನಾಯಕ ಸಿ.ಟಿ. ರವಿ ಸೇರಿ ಹಲವಾರು ನಾಯಕರು ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular