HomeKarnatakaರಾಜ್ಯದಲ್ಲಿ ಬೆಚ್ಚಿಬೀಳಿಸೋ ಕೃತ್ಯ ; ಪತ್ನಿಯ ಪ್ರಿಯಕರನನ್ನು ಕೊಂದು ಸಂಪ್’ನಲ್ಲಿ ಶವ ಬಚ್ಚಿಟ್ಟ ಪತಿ!

ರಾಜ್ಯದಲ್ಲಿ ಬೆಚ್ಚಿಬೀಳಿಸೋ ಕೃತ್ಯ ; ಪತ್ನಿಯ ಪ್ರಿಯಕರನನ್ನು ಕೊಂದು ಸಂಪ್’ನಲ್ಲಿ ಶವ ಬಚ್ಚಿಟ್ಟ ಪತಿ!

ಕೋಲಾರ: ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ವ್ಯಕ್ತಿಯೊಬ್ಬ ಪತ್ನಿಯ ಪ್ರಿಯಕರನನ್ನು ಕೊಲೆ ಮಾಡಿ, ಮೃತದೇಹವನ್ನು ಸಂಪ್‌ನಲ್ಲಿ ಬಚ್ಚಿಟ್ಟಿರುವ ಘಟನೆ ಕೋಲಾರದ ಮಾಲೂರಿನ ಚಿಕ್ಕ ತಿರುಪತಿಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸೊಣ್ಣೇನಹಳ್ಳಿ ವೆಂಕಟೇಶ್ (26) ಕೊಲೆಯಾದ ದುರ್ದೈವಿ. ಸುರೇಶ್ ಪತ್ನಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಕಾರಣಕ್ಕೆ ಸುರೇಶ್ ಹಾಗೂ ಸ್ನೇಹಿತ ಸಂತೋಷ್ ಇಬ್ಬರು ವೆಂಕಟೇಶ್ ನನ್ನು ಹತ್ಯೆ ಮಾಡಿದ್ದಾರೆ.

ಕೊಲೆ ಮಾಡಿದ ಬಳಿಕ ಆರೋಪಿಯು ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಂಪ್‌ನಲ್ಲಿ ಬಚ್ಚಿಟ್ಟಿದ್ದ ಎನ್ನಲಾಗಿದೆ. ಕೆಲವು ದಿನಗಳ ಬಳಿಕ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ಸಂಪ್ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪತ್ನಿಯೊಂದಿಗೆ ಹೊಂದಿದ್ದ ಅಕ್ರಮ ಸಂಬಂಧವೇ ಕೊಲೆಗೆ ಪ್ರಮುಖ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಘಟನೆಯ ಸಂಪೂರ್ಣ ಹಿನ್ನೆಲೆ ಹಾಗೂ ಕೊಲೆಯಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.ಘಟನೆ ಕೋಲಾರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಅಕ್ರಮ ಸಂಬಂಧದ ವಿಚಾರದಲ್ಲಿ ನಡೆದ ಕೊಲೆ ಮತ್ತೊಮ್ಮೆ ಆತಂಕ ಮೂಡಿಸಿದೆ.

ಹೊಲದಲ್ಲಿ ಜೋಡಿಯ ಅಸಭ್ಯ ಕೃತ್ಯ ಕಂಡ ಮಹಿಳೆ ಕೊಲೆ; ಯುವಕ, ಅಪ್ರಾಪ್ತ ಬಾಲಕಿ ವಶಕ್ಕೆ

ಅಜ್ಮೇರ್: ಹೊಲವೊಂದರಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿ ಆಕ್ಷೇಪಾರ್ಹ ಸ್ಥಿತಿಯಲ್ಲಿರುವುದನ್ನು ನೋಡಿದ ಮಹಿಳೆಯೊಬ್ಬರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆರೋಪ ರಾಜಸ್ಥಾನದ ಅಜ್ಮೇರ್ ಜಿಲ್ಲೆಯಲ್ಲಿ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ 25 ವರ್ಷದ ಶಂಕರಲಾಲ್ ಬೈರ್ವಾ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಅಪ್ರಾಪ್ತ ಬಾಲಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಚೋಟ್ಲಾಂಬಾ ಗ್ರಾಮದ ನಿವಾಸಿ ಸೋನಿ ದೇವಿ (38) ಅವರ ಮೃತದೇಹ ಗುರುವಾರ ಬೊರಾಡಾ ರಸ್ತೆಯ ಬಳಿಯ ಬಾವಿಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅವರ ತಲೆಗೆ ಗಾಯವಾಗಿರುವುದು ಹಾಗೂ ಕುತ್ತಿಗೆಯ ಸುತ್ತ ಗುರುತುಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರಿಗೆ ಕೊಲೆ ನಡೆದಿರುವ ಶಂಕೆ ಮೂಡಿತ್ತು.

ಕಿಶನ್‌ಗಢದ ಸರ್ಕಾರಿ ಯಜ್ಞನಾರಾಯಣ ಆಸ್ಪತ್ರೆಯಲ್ಲಿ ನಡೆಸಿದ ಮರಣೋತ್ತರ ಪರೀಕ್ಷೆಯಲ್ಲಿ ಸೋನಿ ದೇವಿ ಕತ್ತು ಹಿಸುಕಿದ ಪರಿಣಾಮ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮೃತೆಯ ಪತಿ ಬಜರಂಗ್ ಲಾಲ್ ಬೈರ್ವಾ ನೀಡಿದ ದೂರಿನ ಆಧಾರದ ಮೇಲೆ ಕೊಲೆ ಪ್ರಕರಣ ದಾಖಲಿಸಲಾಯಿತು.

ತನಿಖೆ ವೇಳೆ ಪೊಲೀಸರು ಸುತ್ತಮುತ್ತಲಿನ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದವರನ್ನು ವಿಚಾರಣೆ ನಡೆಸಿದರು. ಈ ವೇಳೆ ಶಂಕರಲಾಲ್‌ನ ಕುತ್ತಿಗೆಯಲ್ಲಿ ಗೀರುಗಳ ಗುರುತುಗಳು ಕಂಡುಬಂದಿದ್ದು, ಆತ ನೀಡಿದ ಹೇಳಿಕೆಗಳಲ್ಲೂ ವ್ಯತ್ಯಾಸಗಳಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ವಿಚಾರಣೆ ನಡೆಸಿದಾಗ ಶಂಕರಲಾಲ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಏನಿದು ಘಟನೆ?

ಬುಧವಾರ ಮಧ್ಯಾಹ್ನ ಶಂಕರಲಾಲ್ ಹಾಗೂ ಆತನಿಗೆ ಪರಿಚಯವಿದ್ದ ಅಪ್ರಾಪ್ತ ಬಾಲಕಿ ಜೋಳದ ಹೊಲದಲ್ಲಿದ್ದರು. ಇದೇ ವೇಳೆ ಜಾನುವಾರುಗಳಿಗೆ ಮೇವು ತರಲು ಆ ಮಾರ್ಗವಾಗಿ ತೆರಳುತ್ತಿದ್ದ ಸೋನಿ ದೇವಿ ಅವರನ್ನು ನೋಡಿದ್ದಾರೆ ಎನ್ನಲಾಗಿದೆ.

ಇಬ್ಬರನ್ನೂ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಸೋನಿ ದೇವಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ವಿಷಯವನ್ನು ಇತರರಿಗೆ ತಿಳಿಸುತ್ತಾರೆ ಎಂಬ ಭಯದಿಂದ ಶಂಕರಲಾಲ್ ಹಾಗೂ ಬಾಲಕಿ ಸೇರಿಕೊಂಡು ಮಹಿಳೆಯನ್ನು ಆಕೆಯ ಬಟ್ಟೆಯಿಂದಲೇ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಳಿಕ ಶಂಕರಲಾಲ್ ಅಪ್ರಾಪ್ತ ಬಾಲಕಿಯನ್ನು ಮನೆಗೆ ಕಳುಹಿಸಿದ್ದಾನೆ. ಕತ್ತಲಾದ ನಂತರ ಸೋನಿ ದೇವಿಯ ಮೃತದೇಹವನ್ನು ಸಮೀಪದ ಬಾವಿಗೆ ಎಸೆದಿದ್ದಾನೆ ಎನ್ನಲಾಗಿದೆ.

ಕೊಲೆ ನಡೆದಿರುವ ಬಗ್ಗೆ ಅನುಮಾನ ಬಾರದಂತೆ ಶಂಕರಲಾಲ್, ಸೋನಿ ದೇವಿಯ ಕುಟುಂಬದವರೊಂದಿಗೆ ಸೇರಿಕೊಂಡು ಆಕೆಯನ್ನು ಹುಡುಕುವ ನಾಟಕವಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular