HomeKarnatakaಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್: ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್

ಸಿದ್ಧರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್: ಶಾಸಕ ಶ್ರೀನಿವಾಸಗೌಡ ಹೊಸ ಬಾಂಬ್

ಕೋಲಾರ: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆಗೆ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದೆ. ಕೋಲಾರ ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಆಚಾರ್ ನೀಡಿದೆ ಎಂದು ಕೋಲಾರದಲ್ಲಿ ಶಾಸಕ ಶ್ರೀನಿವಾಸ ಗೌಡ ಹೊಸ ಬಾಂಬ್ ಸೇರಿಸಿದ್ದಾರೆ.

ಕೃಷ್ಣಾರೆಡ್ಡಿಗೆ ಸಚಿವ ಸುಧಾಕರ್ ಬಿಜೆಪಿ ಟಿಕೆಟ್ ಆಫರ್ ನೀಡಿದ್ದಾರೆ. ಜನವರಿ 25 ರಂದು ಸಚಿವ ಸುಧಾಕರ್ ಅವರು ಕೃಷ್ಣಾರೆಡ್ಡಿ ಮನೆಗೆ ಭೇಟಿ ನೀಡಿದ್ದ.ರು ನಾವೇ ದುಡ್ಡು ಕೊಡುತ್ತೇವೆ. ನೀವು ಚುನಾವಣೆಗೆ ಸ್ಪರ್ಧಿಸಿ ಎಂದು ಆಫರ್ ನೀಡಲಾಗಿದೆ. ವರ್ತೂರು ಪ್ರಕಾಶ್ ಸಮ್ಮುಖದಲ್ಲಿಯೇ ಕೃಷ್ಣಾರೆಡ್ಡಿಗೆ ಬಿಜೆಪಿ ಟಿಕೆಟ್ ಆಫರ್ ನೀಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ವಿರುದ್ಧ ಗೆದ್ದೇ ಗೆಲ್ಲುತ್ತೇವೆ ಎನ್ನುವ ನಂಬಿಕೆಯಲ್ಲಿ ಬಿಜೆಪಿ ಇದೆ. ಕೃಷ್ಣಾರೆಡ್ಡಿಗೆ ಸಚಿವ ಸುಧಾಕರ್ ಬಿಜೆಪಿ ಟಿಕೆಟ್ ಆಫರ್ ನೀಡಿದ್ದು ಏಕೆ? ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ ಅವರ ಮನೆಗೆ ಹೋಗಿದ್ದು ಏಕೆ? ಎಂದು ಬಿಜೆಪಿ ನಾಯಕರು ಮತ್ತು ಸಚಿವ ಸುಧಾಕರ್ ಅವರಿಗೆ ಶಾಸಕ ಶ್ರೀನಿವಾಸಗೌಡ ಪ್ರಶ್ನಿಸಿದ್ದು, ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆದ್ದು ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular