ಕೋಲಾರ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಅಬ್ಬೇನಹಳ್ಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚೆನ್ನೈ ಮೂಲದ ಗೋಪಿ (38), ಗೌತಮ್ ರಮೇಶ್(28), ಹರಿಹರನ್ (27) ಹಾಗೂ ಜಯಂತ್ (30) ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
