HomeKarnatakaBIG UPDATE: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

BIG UPDATE: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು

ಕೋಲಾರ: ಕೂಲಿ ಕೆಲಸ ಮುಗಿಸಿ ವಾಪಾಸ್ ಆಗುತ್ತಿದ್ದ ವೇಳೆ ದ್ವಿಚಕ್ರ ವಾಹನಗಳಿಗೆ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿ ಬಳಿ ನಡೆದಿದೆ.

ಬೊಲೆರೋ ವಾಹನ 3 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಕೋನಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ.

ಕೂಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಬೊಲೆರೋ ಡಿಕ್ಕಿಯಾಗಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟ್ನಾ ಸ್ಥಳಕ್ಕೆ ಪೊಲಿಸರು ದೌಡಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular