HomeKarnatakaBREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

BREAKING NEWS: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ; ಮುಗಿಲೆತ್ತರಕ್ಕೆ ವ್ಯಾಪಿಸಿದ ಬೆಂಕಿ

ಕೋಲಾರ: ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿದ್ದು, ಧಗ ಧಗನೆ ಹೊತ್ತಿ ಉರಿದಿದೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ಸೋಮಣ್ಣ ಎಂಬುವವರಿಗೆ ಸೇರಿದ ಮಂಡಿಯಲ್ಲಿ ಈ ಘಟನೆ ನಡೆದಿದೆ. ಸುಮಾರು 1000ಕ್ಕೂ ಹೆಚ್ಚು ಟೊಮೆಟೊ ಕ್ರೇಟ್ ಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular