ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಮೂರು ಅಂತಸ್ತಿನ ಕಟ್ಟಡವೊಂದು ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕೆಇಬಿ ರಸ್ತೆಯಲ್ಲಿ ನಡೆದಿದೆ.

ಬೂದಿಕೋಟೆ ರಾಜ್ ಕೂಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡ ಇದಾಗಿದೆ. ಕಟ್ಟಡದ ನೆಲಮಹಡಿ ನವೀಕರಣ ವೇಳೆ ಇಂದು ಬೆಳಿಗ್ಗೆ ಕಟ್ಟಡ ವಾಲಿದೆ. ಕಟ್ಟಡ ವಾಲುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೋಡಿ ಬಂದಿದ್ದಾರೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸವಾಗಿದ್ದವು.

ಕಟ್ಟಡ ವಾಲುತಿದ್ದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿತ್ತು. ಅಗ್ನಿಶಾಮಕ ಸಿಬ್ಬಂದಿ, ಬೆಸ್ಕಾಂ ಸಿಬ್ಬಂದಿಗೂ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುತ್ತಮುತ್ತಲಿನ ಜನರನ್ನು ದೂರ ತೆರಳುವಂತೆ ಸೂಚಿಸಿದ್ದರು. ಇದಾದ ಕೆಲವೇ ಸಮಯಗಳಲ್ಲಿ ಕಟ್ಟಡ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಸದ್ಯ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಆದರೆ ಕಟ್ಟಡದ ಮುಂದಿನ ಶಾಲೆಯ ಗೋಡೆಗೆ ಹಾನಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read