HomeLatest NewsBIG NEWS: ಕೋಲಾರದಲ್ಲಿ 10 ಜನ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

BIG NEWS: ಕೋಲಾರದಲ್ಲಿ 10 ಜನ ಬಾಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

ಕೋಲಾರ: 10 ಜನ ಬಾಂಗ್ಲಾ ಪ್ರಜೆಗಳನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಬಂಧಿಸಲಾಗಿದೆ.

ಶ್ರೀನಿವಾಸಪುರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಮ್ಮೊಂದಿಗೆ ಇನ್ನೂ ಎಂಟು ಜನರಿರುವುದಾಗಿ ಅವರು ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 10 ಜನ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಬಳಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ. ಹತ್ತು ಬಾಂಗ್ಲಾ ಪ್ರಜೆಗಳು ಬಾಂಗ್ಲಾದ ಕುಲ್ನಾ ರಾಜ್ಯದ ಬಾಗೇರ್ ಹಠ್ ಜಿಲ್ಲೆಯ ತಪಲ್ಬರಿ ಗ್ರಾಮದವರು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular