ಕೋಲಾರ: ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಮಾರಿಕುಪ್ಪಂ ಬಳಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ವೆಂಕಟನೂರು ಗ್ರಾಮದ ಮಾರಿ (60) ಲಾಲ್ಕುಟ್ಟೈ ಗ್ರಾಮದ ಮುನಿಯಪ್ಪ (58) ಹಾಗೂ ಗೋವಿಂದ (60) ಎಂದು ಗ್ರುತಿಸಲಾಗಿದೆ.
ಇವರೆಲ್ಲರೂ ತಮಿಳುನಾಡಿನ ಧರ್ಮಪುರಿ ಜಿಲ್ಲೆಯವರಾಗಿದ್ದು, ಮೂವರಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ವಾರಿಯಲ್ಲಿ ತೋಡಿರುವ ರಂಧ್ರಗಳಲ್ಲಿ ಸ್ಫೋಟಕ ವಸ್ತು ತುಂಬುವ ವೇಳೆ ಉಂತಾದ ಕಿಡಿಯಿಂದ ಬೆಂಕಿಕಾಣಿಸಿಕೊಂಡಿದ್ದು, ಅದರಿಂದ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

