HomeLatest NewsBREAKING: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

BREAKING: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು!

ಕೋಲಾರ: ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಕೃಷ್ಣಾವರಂ ಬಳಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಕೃಷ್ಣಾವರಂ ಗ್ರಾಮದ ಆಕಾಶ್ (33), ಜಾನ್ (30) ಎಂಬುವವರು ಮೃತಪಟ್ಟಿದ್ದಾರೆ. ಉಳಿದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಪ್ಪು, ತಮಿಳರಸನ್, ನಾಗರಾಜು ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಬೆಮಲ್ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಮಲ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular