HomeKarnatakaBIG NEWS: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ; ಕೈ ಕಾರ್ಯಕರ್ತರು-ಮುಖಂಡರ ನಡುವೆ ಹೊಡೆದಾಟ

BIG NEWS: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ; ಕೈ ಕಾರ್ಯಕರ್ತರು-ಮುಖಂಡರ ನಡುವೆ ಹೊಡೆದಾಟ

ಕೋಲಾರ: ಕಾಂಗ್ರೆಸ್ ಕಚೇರಿಯಲ್ಲಿ ಮಾರಾಮಾರಿ ನಡೆದ ಘಟನೆ ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ. ಕಾರ್ಯಕರ್ತರು ಹಾಗೂ ಮುಖಂಡರ ನಡುವೆ ಹೊಡೆದಾಟ ನಡೆದಿದೆ.

ಬೂತ್ ಮಟ್ಟದ ಏಜೆಂಟರ ಸಭೆಯ ವೇಳೆ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ಮಧ್ಯೆ ಗಲಾಟೆಯಾಗಿದ್ದು, ವೇದಿಕೆ ಮೇಲೆ ಕುಳಿತಿದ್ದ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದೆ.

ಕೊತ್ತೂರು ಮಂಜುನಾಥ್ ಬೆಂಬಲಿಗರು ಶ್ರೀನಿವಾಸ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ. ಕೊರಳಪಟ್ಟಿ ಹಿಡಿದು ಎಳೆದಾಡಿ ಹೊಡೆದಿದ್ದಾರೆ. ಅಂಬರೀಶ್, ಶಿವಕುಮಾರ್ ಹಾಗೂ ಅಪ್ಸರ್ ಎಂಬ ಮೂವರಿಂದ ಹಲ್ಲೆ ನಡೆದಿದೆ. ಬೂತ್ ಮಟ್ಟದ ಸಭೆ ರಣಾಂಗಣವಾಗಿ ಮಾರ್ಪಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫ್ಲೆಕ್ಸ್ ವಿಚಾರವಾಗಿ ಆರಂಭವಾದ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಮುಖಂದರು ಹಾಗೂ ಕಾರ್ಯಕರ್ತರೇ ಹೊಡೆದಾಡಿಕೊಂಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರ ಎದುರಲ್ಲೇ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular