ಕೋಲಾರ: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯೊಬ್ಬಳು ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ.
ಅರ್ಚನಾ (17) ಮೃತ ಬಾಲಕಿ. ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಸ್ಮಶಾನದಲ್ಲಿ ಪೋಷಕರು ಶವ ಸಂಸ್ಕಾರ ಮಾಡುತ್ತಿದ್ದ ವೇಳೆ ಪೊಲೀಸರು ತಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮುಳಬಾಗಿಲು ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.