HomeLatest NewsBREAKING: ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ!

BREAKING: ಜಿಲ್ಲಾಸ್ಪತ್ರೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ನೌಕರ!

ಕೋಲಾರ: ಜಿಲ್ಲಾಸ್ಪತ್ರೆಯಲ್ಲಿಯೇ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿರುವ ನೌಕರ. ಇಎನ್ ಟಿ ವಿಭಾಗದ ಕೊಠಡಿಯಲ್ಲಿಯೇ ಹರೀಶ್ ಬಾಬು ನೇಣಿಗೆ ಕೊರಳೊಡ್ಡಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕನಹಳ್ಳಿ ನಿವಾಸಿಯಾಗಿದ್ದ ಹರೀಶ್ ಬಾಬು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

ಇದೀಗ ಇದ್ದಕ್ಕಿದ್ದಂತೆ ಆಸ್ಪತ್ರೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ನೌಕರನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೋಲಾರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular