HomeKarnatakaBIG NEWS: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಆರೋಪಿಯಿಂದ ಹೈಡ್ರಾಮಾ

BIG NEWS: ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ; ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಆರೋಪಿಯಿಂದ ಹೈಡ್ರಾಮಾ

ಕೋಲಾರ: ಪ್ರೀತಿ ನಿರಾಕರಿಸಿದ್ದಕ್ಕೆ ಹೈಸ್ಕೂಲು ವಿದ್ಯಾರ್ಥಿನಿಯನ್ನು ಹತ್ಯೆಗೈದು ಬಳಿಕ ಕತ್ತು ಸೀಳಿಕೊಂಡು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ, ಆಸ್ಪತ್ರೆದೆ ದಾಖಲಾದ ಬಳಿಕ ಅಲ್ಲಿಯೂ ಮತ್ತೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಹೊಸಕೋಟೆ ತಾಲೂಕಿನ ಅನುಗೊಂಡಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆ.7ರಂದು 9ನೇ ತರಗತಿ ವಿದ್ಯಾರ್ಥಿನಿಯನ್ನು ಚಾಕುವಿನಿಂದ ಇರಿದು ಹತ್ಯೆಗಿದಿದ್ದ ಆರೋಪಿ ನಿತಿನ್, ತಾನೂ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಯಲ್ಲಿ ಯುವಕನಿಗೆ ಸರ್ಜರಿ ಮಾಡಿ ಚಿಕಿತ್ಸೆ ನೀಡಲಾಗಿದ್ದು, ಇನ್ನೇನು ಗುಣಮುಖನಾಗುತ್ತಿದ್ದಾನೆ ಎನ್ನುವಷ್ಟರಲ್ಲಿ ಇಂದು ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೋಲಾರ ನಗರದ ಆರ್.ಆರ್.ಜಾಲಪ್ಪ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಯ ಕಾರಿಡಾರ್ ನಲ್ಲಿ ವಾಕಿಂಗ್ ಮಡಲು ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣ ಆಸ್ಪತ್ರೆಯ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ. ತನ್ನನ್ನು ಸಾಯಲು ಬಿಟ್ಟುಬಿಡಿ ಎಂದು ಗೋಗರೆದಿದ್ದಾನೆ. ಸ್ಥಳಕ್ಕೆ ಗಲ್ ಪೇಟೆ ಪೊಲಿಸರು ಭೇಟಿ ನೀಡಿ ತನಿಖೆ ನನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular