HomeKarnatakaBIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

BIG NEWS: ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಕೋಲಾರ: ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ಮುಖಂಡರ ಎದುರಲ್ಲೇ ವ್ಯಕ್ತಿಯ ಬರ್ಬರ ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರದ ಮಾಲೂರು ತಾಲೂಕಿನ ಸಿಗೊಂಡ ಹಳ್ಳಿ ಬಳಿ ಕೊಲೆ ಆರೋಪಿಗಳ ಮೇಲೆ ಆತ್ಮರಕ್ಷಣೆಗಾಗಿ ಮಾಸ್ತಿ ಠಾಣೆ ಇನ್ಸ್ ಪೆಕ್ಟರ್ ರಾಮಪ್ಪ ಗುತ್ತೇರ್ ಫೈರಿಂಗ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲೆ ಆರೋಪಿಗಳಾದ ಅನಿಲ್ ಹಾಗೂ ಪ್ರಮೋದ್ ಎಂಬುವವರನ್ನು ಬಂಧಿಸಲೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ರಾಮಪ್ಪ ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಮೀನು ಹಿಡಿಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪಂಚಾಯ್ತಿ ವೇಳೆ ಅನಿಲ್ ಹಾಗೂ ಪ್ರಮೋದ್ ಎಂಬುವವರು ಲೋಕೇಶ್ ಹಾಗೂ ದರ್ಶನ್ ಎಂಬುವವರ ಮೇಲೆ ಚಾಕುವಿನಿಂದ ಇರಿದಿದ್ದರು. ಶುಕ್ರವಾರ ಈ ಘಟನೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲೋಕೇಶ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular