HomeLatest NewsBIG NEWS: ರಾಜ್ಯದಲ್ಲಿ ಪೈಶಾಚಿಕ ಕೃತ್ಯ: 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ

BIG NEWS: ರಾಜ್ಯದಲ್ಲಿ ಪೈಶಾಚಿಕ ಕೃತ್ಯ: 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ

ಕೋಲಾರ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಕಾಮಾಂಧರು 80 ವರ್ಷದ ವೃದ್ಧೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ದುರುಳರು 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, ಬಳಿಕ ೧೫,೦೦೦ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸಪುರದ ಹೆಚ್.ಜಿ.ಹೊಸೂರು ಗ್ರಾಮದ ಲಕ್ಷ್ಮೀದೆವಮ್ಮ ಕೊಲೆಯಾದ ಮಹಿಳೆ.

ಸೋಮವಾರ ಸಂಜೆ ಬಸ್ ಗಾಗಿ ಕಾದು ಕುಳಿತಿದ್ದ ಮಹಿಳೆ ಬಳಿ ವ್ಯಕ್ತಿಯೊಬ್ಬ ಬಂದಿದ್ದು, ಆಕೆಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿ ಬಳಿಕ ಕತ್ತು ಹಿಸುಕು ಕೊಲೆಗೈದು, ಆಕೆಯ ಬ್ಯಾಗ್ ನಲ್ಲಿದ್ದ 15 ಸಾವಿರ ಹಣವನ್ನು ದೋಚಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿ ಬಾಬು ಜಾನ್ ಎಂಬಾತನನ್ನು ಶ್ರೀನಿವಾಸಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular