HomeKarnatakaಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕೋಲಾರ: ತಾಲೂಕು ಕಚೇರಿ ವಿರುದ್ಧ ಸಾರ್ವಜನಿಕರಿಂದ ಸಾಲು ಸಾಲು ದೂರು, ಲಂಚ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೋಲಾರ ತಾಲೂಕು ಕಚೇರಿ ಮೆಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಹಾಗೂ ಕೋಲಾರ ಎಸ್ ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ತಹಶೀಲ್ದಾರ್ ಹರ್ಷವರ್ಧನ್ ಹಾಗೂ ಇತರ ಅಧಿಕಾರಿಗಳ ಕೊಠಡಿಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.

ಕೋಲಾರ ತಾಲೂಕು ಕಚೇರಿಯಲ್ಲಿ ಲಂಚ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸಾರ್ವಜನಿಕರು ಸರಣಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular