ಕೋಲಾರ: ವಿದ್ಯಾರ್ಥಿಯ ಪೋಷಕರಿಬ್ಬರು ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಕ್ಷೇತ್ರನಹಳ್ಳಿಯಲ್ಲಿ ನಡೆದಿದೆ.
ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿ ಚರಣ್ ಎಂಬಾತ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಬಳಿಕ ವಿದ್ಯಾರ್ಥಿ ಶಾಲೆಗೆ ಹೋಗಿದ್ದಾಗ ಶಿಕ್ಷಕಿ ಮಂಜುಳಾ ಪ್ರಶ್ನೆ ಮಾಡಿದ್ದಾರೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿ ಚರಣ್ ತಂದೆ ಚೌಡಪ್ಪ ಎಂಬುವವರು ಶಾಲೆಗೆ ನುಗ್ಗಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದಾರೆ.
ಶಾಲೆಯಲ್ಲಿ ಗಲಾಟೆ ಮಾಡಿ ಶಿಕ್ಷಕಿ ತಲೆಯನ್ನು ಗೋಡೆಗೆ ಗುದ್ದಿದ್ದಾರೆ. ಶಿಕ್ಷಕಿಯ ತಲೆಗೆ ಗಂಭೀರವಾದ ಪೆಟ್ಟುಬಿದ್ದಿದ್ದೆ. ಗಾಯಾಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕಿ ನೀಡಿದ ದೂರುನ ಹಿನ್ನೆಲೆಯಲ್ಲಿ ಚೌಡಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇಸ್ ದಾಖಲಾಗುತ್ತಿದ್ದಂತೆ ಚೌಡಪ್ಪ ಕುಟುಂಬ ಊರಿನಿಂದ ನಾಪತ್ತೆಯಾಗಿದ್ದು, ಚೌಡಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.