HomeKarnatakaಮನೆಗೆ ನುಗ್ಗಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಮನೆಗೆ ನುಗ್ಗಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾದ ದುಷ್ಕರ್ಮಿಗಳು

ಕೋಲಾರ: ಮನೆಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮುತ್ಯಾಲಪೇಟೆ ಬಡಾವಣೆಯಲ್ಲಿ ನಡೆದಿದೆ.

ದಿವ್ಯಶ್ರೀ (47) ಕೊಲೆಯಾದ ಶಿಕ್ಷಕಿ. ಮುತ್ಯಾಲಪೇಟೆ ಬಡಾವಣೆಯ ಮನೆಯಲ್ಲಿ ಶಿಕ್ಷಕಿ ದಿವ್ಯಶ್ರೀ ತನ್ನ ಮಗಳೊಂದಿಗೆ ವಾಸವಾಗಿದ್ದರು. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಮೂವರ ತಂಡ, ಶಿಕ್ಷಕಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ. ಬಳಿಕ ಆಕೆಯ ಮಗಳನ್ನು ಹತ್ಯೆ ಮಾಡಲು ಯತ್ನಿಸಿದ್ದಾರೆ. ಆದರೆ ಮಗಳು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ್ದಾಳೆ. ಸದ್ಯ ಮಗಳು ಬಚಾವ್ ಆಗಿದ್ದಾಳೆ. ಕೊಲೆ ಬಳಿಕ ಮೂವರು ದುಷ್ಕರ್ಮಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಮೃತ ಶಿಕ್ಷಕಿ ಉದ್ಯಮಿ ಪದ್ಮನಾಭ್ ಅವರ ಪತ್ನಿಯಾಗಿದ್ದು, ಮುಳಬಾಗಿಲು ತಾಲೂಕಿನ ಮುಡಿಯನೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಕೋಲಾರ ಎಸ್ ಪಿ ನಿಖಿಲ್ ಬಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular